ಬಂಟ್ವಾಳ:ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಕಳಾಯಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ.
ಸೆ.1, ಗುರುವಾರ ಸಂಜೆ ಬಾಲಕ ಮಾಝಿನ್ ಮನೆಯ ಬಳಿ ಆಟವಾಡುತ್ತಿದ್ದಾಗ ಅವನ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.