ನವದೆಹಲಿ: ಕೇಂದ್ರ ಸರ್ಕಾರವು ಸೆ 28, ಬುಧವಾರ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಹಾಗೂ ಅದರ ಅಂಗಸಂಸ್ಥೆಗಳನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ 5 ವರ್ಷಗಳ ಕಾಲ ನಿಷೇಧಿಸಿದೆ. ಪಿಎಫ್ಐ ಸಂಘಟನೆಯು ಐಸಿಸ್ ಮತ್ತು ಇತರ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದೆ ಎಂದು ಸರ್ಕಾರ ಆರೋಪಿಸಿದೆ.
ಉಗ್ರ ಸಂಘಟನೆಗಳ ಮುಖಂಡರೊಂದಿಗೆ ಸಂಪರ್ಕ, ಹಾಗೂ ದುಷ್ಕೃತ್ಯಕ್ಕೆ ಕೋಟ್ಯಂತರ ಹಣ ಬಳಕೆ ಆರೋಪದಡಿ ದೇಶದ ಹಲವು ರಾಜ್ಯಗಳಲ್ಲಿ ಎನ್ಐಎ ರೇಡ್ ನಡೆಸಿತ್ತು. ಅಲ್ಲದೆ, ಪಿಎಫ್ಐ ಯೊಂದಿಗೆ ಸಂಬಂಧ ಹೊಂದಿರುವ 15 0 ಕ್ಕೂಹೆಚ್ಚುಮಂದಿಯನ್ನು ಬಂಧಿಸಿದ್ದವು.ಉತ್ತರ ಪ್ರದೇಶ, ಕರ್ನಾಟಕ, ಗುಜರಾತ್, ದೆಹಲಿ, ಮಹಾರಾಷ್ಟ್ರ, ಅಸ್ಸಾಂ ಮತ್ತು ಮಧ್ಯಪ್ರದೇಶದಲ್ಲಿ ರಾತ್ರೋರಾತ್ರಿ ಹಲವರನ್ನು ಬಂಧಿಸಲಾಗಿತ್ತು. ಸೆಪ್ಟೆಂಬರ್ 22 ರಂದು, ಎನ್ಐಎ ನಡೆಸಿದ ದಾಳಿಯಲ್ಲಿ ಪಿಎಫ್ಐ ನ 100 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ ನಂತರ ಕೇಂದ್ರ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ.
ದೇಶಾದ್ಯಂತ ಕಳೆದ 2 ವಾರಗಳ ಕಾಲ ಪಿಎಫ್ಐ ಸಂಘಟನೆ ಮೇಲೆ ರೇಡ್ಗಳು ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಅಂಗಸಂಸ್ಥೆಗಳನ್ನು ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಘೋಷಿಸುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI), ರಿಹಾಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ಕೇರಲದ ರಿಹಾಬ್ ಫೌಂಡೇಶನ್ ಸೇರಿದಂತೆ ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘಗಳು ಎಂದು ಕೇಂದ್ರ ಗೃಹ ಸಚಿವಾಲಯ ರಾಜ್ಯಪತ್ರದ ಮೂಲಕ ಆದೇಶ ಹೊರಡಿಸಿದೆ.
ಪಿಎಫ್ಐ ಮತ್ತು ಅದರ ಇತರ ಸಂಘಟನೆಗಗಳನ್ನುನಿಷೇಧಿಸಿರುವ ಕೇಂದ್ರ ಸರ್ಕಾರ. ನಿಷೇಧಿತ ಪಿಎಫ್ಐ ಮತ್ತಿತರ ಸಂಘಟನೆಗಳ ಕಚೇರಿಗಳು ನಗದು ಜಪ್ತಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು, ಸದಸ್ಯರ ಬಂಧನ ಇತ್ಯಾದಿ ಅಧಿಕಾರವನ್ನುರಾಜ್ಯ ಸರ್ಕಾರಗಳಿಗೆ ನೀಡಿದೆ.
ಮಂಗಳೂರಿನ ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳಿಗೆ ಸೇರಿದ ಕಚೇರಿಗಳಲ್ಲಿ ಸೆ 28 ,ಬುಧವಾರ ಪೊಲೀಸರು ತಪಾಸಣೆ ನಡೆಸಿ ಕಚೇರಿಗಳಿಗೆ ಬೀಗಮುದ್ರೆ ಹಾಕಿದ್ದಾರೆ.
Subscribe to Updates
Get the latest creative news from FooBar about art, design and business.