ಮಂಗಳೂರು : ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ 2 ವರ್ಷಗಳಿಂದ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ಡಿ. 15, ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅವರು ಮೂಲತಃ ಬಾಗಲಕೋಟೆಯ ನಿವಾಸಿಯಗಿದ್ದು, ಊರಿಗೆ ಹೋಗಿದ್ದ ವೇಳೆ ಗುರುವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಮೃತರು ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.