ಕಡಬ, ಫೆ. 16 : ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ .
ಚರಂಡಿಗೆ ಉರುಳಿ ಬಿದ್ಬ ಪರಿಣಾಮ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.