ಶಿವಮೊಗ್ಗ, ಫೆ 27 : ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ 449ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಲೋಕಾರ್ಪಣೆಗೊಳಿಸಿದರು.
ಬಳಿಕ ಪ್ರಧಾನಿ ಮೋದಿಯವರು ಮಾತಾಡಿ ಇಂದು ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ದೊರೆತಿದೆ ಈ ಮೂಲಕ ಶಿವಮೊಗ್ಗದ ಜನರ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತ್ತರು ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದರು.