ಕಾರ್ಕಳ, ಮಾ. 04 : ಅನಾರೋಗ್ಯದಿಂದ ಮನನೊಂದು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ.
ಮೃತರನ್ನು ಕುಂದಾಪುರ ಕರಾವಳಿ ಶಿರೂರು ನಿವಾಸಿ ಶೀಲಾವತಿ ಶೆಡ್ಡಿ ಎಂಬವರ ಮಗಳು ಸೀಮಾ (22) ಎಂದು ಗುರುತಿಸಲಾಗಿದೆ.ಇವರು ಕಾರ್ಕಳದ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿದ್ದರು.
ಸೀಮಾ ಅವರು ನರ ಹಾಗೂ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದು 4-5 ತಿಂಗಳ ಹಿಂದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೀಗ ಮತ್ತೆ ಅದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.