ಪುತ್ತೂರು, ಮಾ. 06 : ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಬಳಿ ಮಾ.೫, ಭಾನುವಾರ ರಾತ್ರಿ ನಡೆದಿದೆ.
ಮೃತರನ್ನುಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಎಂದು ಗುರುತಿಸಲಾಗಿದೆ.
ಪೊಲೀಸ್ ಜೀಪ್ ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದರೆ, ಬೈಕ್ ಪುತ್ತೂರಿನಿಂದ ಆರ್ಲಪದವು ಕಡೆಗೆ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.