ಮಂಗಳೂರು,ಮಾ. 09 : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿದ್ದು,ಕರಾವಳಿ ಭಾಗದಲ್ಲಿ ಮತ್ತೊಮ್ಮೆ ದೇಶದಲ್ಲಿಯೇ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದೆ.
ಒಣಹವೆ ಹಾಗೂ ಉತ್ತರದಿಂದ ದಕ್ಷಿಣಕ್ಕೆ ಬೀಸುತ್ತಿರುವ ಗಾಳಿಯಿಂದ ರಾಜ್ಯದಲ್ಲಿ ತಾಪಮಾನ ಒಂದೇ ಸಮನೆ ಏರಿಕೆಯಾಗುತ್ತಿದೆ. ವಾತಾವರಣದಲ್ಲಿ ಬಿಸಿ ಹೆಚ್ಚಾಗಿ ತೇವಾಂಶ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಈ ಬಾರಿ ಬೇಸಿಗೆಯು ವಾಡಿಕೆಗಿಂತ ಮೊದಲೇ ಪ್ರಾರಂಭವಾಗಿದೆ. ಮಾರ್ಚ್ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.