ಮುಂಬೈ, ಮಾ. 20 : ಟೆಕ್ ಕಂಪೆನಿಯೊಂದರ ಸಿಇಒ(ಮಹಿಳೆ) ಜಾಗಿಂಗ್ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಬೈಯ ವರ್ಲಿಯಲ್ಲಿ ಭಾನುವಾರ ನಡೆದಿದೆ.
ಮೃತರನ್ನು ರಾಜಲಕ್ಷ್ಮಿ ರಾಮಕೃಷ್ಣನ್ (38) )ಎಂದು ಗುರುತಿಸಲಾಗಿದೆ.
ರಾಜಲಕ್ಷ್ಮಿ ಅವರು ಭಾನುವಾರ ಬೆಳಗ್ಗೆ ವರ್ಲಿ ಡೇರಿ ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಜಲಕ್ಷ್ಮಿ ಅವರಿಗೆ ಢಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಬಿದ್ದ ಅವರ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಾರು ಚಾಲಕನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.