ಮಂಗಳೂರು, ಏ. 21 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೇದವ್ಯಾಸ್ ಕಾಮತ್ ಅವರು ಏ. 17 ,ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಗಣ್ಯರ ಸಮ್ಮುಖದಲ್ಲಿ ನಾಮಪತ್ರನಾಮಪತ್ರ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ವೇದವ್ಯಾಸ್ ಕಾಮತ್ ಅವರು ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಾರ್ ಸ್ಟ್ರೀಟ್ ನ ವೆಂಕಟರಮಣ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು.
ವೇದವ್ಯಾಸ್ ಕಾಮತ್ ಅವರು ಹೆಚ್ಚಿನ ಸಂಖ್ಯೆಯ ಬೆಂಬಲಿಗರೊಂದಿಗೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮೆರವಣಿಗೆಯಲ್ಲಿ ಆಗಮಿಸಿದರು.
ಮೆರವಣಿಗೆಯಲ್ಲಿ ಮೇಯರ್ ಜಯಾನಂದ ಅಂಚನ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ರವಿಶಂಕರ್ ಮಿಜಾರ್, ಸುಧೀರ್ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.