ಸುರತ್ಕಲ್ ಏ. 21: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರು ಏ.20, ಗುರುವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಕಾವೂರು ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಸಿ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ರೋಡ್ ಶೋ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ರೋಡ್ ಶೋ ನಲ್ಲಿ ಮಿಥುನ್ ರೈ, ಸುಧೀರ್ ಕುಮಾರ್ ಮುರಳಿ, ಗಿರೀಶ್ ಆಳ್ವ, ಶಾಹುಲ್ ಹಮೀದ್, ನೀರೇಶ್ ಪಾಲ್, ಮಾಜಿ ಮೇಯರ್ ಕವಿತಾ ಸನಿಲ್, ಉಮೇಶ್ ದಂಡೆಕೇರಿ, ಕೆ. ಅಭಯಚಂದ್ರ ಜೈನ್, ಯು. ಪಿ ಇಬ್ರಾಹಿಂ, ಶಶಿಕಲಾ ಪದ್ಮನಾಭ, ಜೇಸನ್ ಸುರತ್ಕಲ್, ಚಂದ್ರಹಾಸ್ ಪೂಜಾರಿ, ಶ್ರೀನಿವಾಸ್ ಸಾಲಿಯಾನ್, ಮಂಗಳೂರು ಉತ್ತರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ ಮತ್ತಿತರರು ಉಪಸ್ಥಿತರಿದ್ದರು.