ಬಂಟ್ವಾಳ, ಏ. 21 : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಏ.20,ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನಾ ಬಿ. ರಮಾನಾಥ ರೈಯವರು ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ,ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೊಡಂಕಾಪು ಚರ್ಚ್ ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಿತ್ತಬೈಲು ಮೊಯ್ದಿನ್ ಜುಮಾ ಮಸೀದಿ, ಕೆಳಗಿನಪೇಟೆ ಮಸೀದಿಯಲ್ಲೂ ಪ್ರಾರ್ಥಿಸಿದರು.
ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಹೊರಟ ಹೆಚ್ಚಿನ ಸಂಖ್ಯೆಯ ಜನರ ಉತ್ಸಾಹಭರಿತ ಪಾದಯಾತ್ರೆ ಬಿ.ಸಿ.ರೋಡ್ ಬಸ್ ನಿಲ್ದಾಣದ ವರೆಗೆ ಸಾಗಿತು. ನಂತರ ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಪಕ್ಷದ ಪ್ರಮುಖರೊಂದಿಗೆ ತೆರಳಿದ ರೈಗಳು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಜೇಶ್ವರ ಶಾಸಕ ಅಶ್ರಫ್, ಕೇರಳದ ಖ್ಯಾತ ನ್ಯಾಯವಾದಿ ಗೋವಿಂದನ್, ನ್ಯಾಯವಾದಿ ಅಶ್ವನಿ ಕುಮಾರ್ ರೈ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ ಪ್ರಮುಖರಾದ ಎಂ.ಎಸ್. ಮುಹಮ್ಮದ್, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಜನಾರ್ಧನ ಚೆಂಡ್ತಿಮಾರ್, ಅಬ್ಬಾಸ್ ಅಲಿ, ರಾಕೇಶ್ ಮಲ್ಲಿ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ, ನ್ಯಾಯವಾದಿ ಸುರೇಶ್ ಬಿ. ನಾವೂರ, ರೈಯವರ ಧರ್ಮಪತ್ನಿ ಧನಭಾಗ್ಯ ರೈ, ಸಹೋದರಿ ಚೆನ್ನವೇಣಿ ಎಂ. ಶೆಟ್ಟಿ ರಮಾನಾಥ ರೈಗಳ ಮಗಳು ಚರಿಷ್ಮಾ ರೈ,ಬಾಲಕೃಷ್ಣ ಆಳ್ವ ಕೊಡಾಜೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತು ಪಕ್ಷದ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪ್ರಮುಖರುಗಳು ಉಪಸ್ಥಿತರಿದ್ದರು.