ಬೆಳ್ತಂಗಡಿ : ಏ. 23: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜ ಅವರು ಏ. 17,ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಕುತ್ಯಾರು ಶ್ರೀ ಸೋಮನಾಥ ದೇವರ ಸನ್ನಿಧಿಗೆ ತೆರಳಿ ಶ್ರೀ ದೇವರಲ್ಲಿ ಪ್ರಾರ್ಥಿಸಿದರು. ಬಳಿಕ ಹರೀಶ್ ಪೂಂಜ ಅವರು ಸೋಮನಾಥ ದೇವರ ಸನ್ನಿಧಿಯ ವಠಾರದಲ್ಲಿ ಸೇರಿದ್ದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರೊಂದಿಗೆ ಚೆಂಡೆ, ಕೊಂಬು, ವಾದ್ಯ, ನಾಸಿಕ್ ಬ್ಯಾಂಡ್,ವಾದ್ಯಗಳೊಂದಿಗೆ ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೆರವಣಿಗೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ವೇಳೆ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಹಿರಿಯರಾದ ಸುಬ್ರಮಣ್ಯ ಅಗರ್ತ ಮೊದಲಾದವರು ಉಪಸ್ಥಿತರಿದ್ದರು.