ಸಿದ್ಧಕಟ್ಟೆ, ಎ.26: ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಅವರು ಸಿದ್ಧಕಟ್ಟೆ ಚರ್ಚ್ ಬಳಿಯಿಂದ ಪೇಟೆಯ ತನಕ ಬುಧವಾರ ಸಂಜೆ ರೋಡ್ ಶೋ ನಡೆಸಿ ಮತ ಯಾಚಿಸಿದರು. ಹಲವಾರು ಕಾರ್ಯಕರ್ತರೊಂದಿಗೆ ಸಿದ್ಧಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾ ಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು.
ಬಳಿಕ ಸಿದ್ಧಕಟ್ಟೆ ಜಂಕ್ಷನ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯು ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡುತ್ತಿದ್ದು, ಇದು ಕಾರ್ಯಕರ್ತರ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ. ಪಕ್ಷ ಇದೀಗ ನನಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಜನತೆ ಆಶೀರ್ವಾದ ಮಾಡಿದರೆ ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನು ರೂಪಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಚುನಾವಣಾ ಪ್ರಭಾರಿ ರವಿಶಂಕರ್ ಮಿಜಾರ್, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಾಧವ ಮಾವೆ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ, ಕರ್ಕಳ, ಸಂಗಬೆಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಪೂಜಾರಿ,ಕೇರಳ-ಪಾಲಕ್ಕಾಡ್ ಬಿಜೆಪಿ ಜಿಲ್ಲಾಧ್ಯಕ್ಷ ಹರಿದಾಸ್, ಕುಕ್ಕಿಪಾಡಿ ಗ್ರಾಪಂ ಅಧ್ಯಕ್ಷೆ ಸುಜಾತಾ, ಪಕ್ಷ ಪ್ರಮುಖರಾದ ದೇವದಾಸ ಶೆಟ್ಟಿ, ಉಮೇಶ್ ಗೌಡ, ರಂಜಿತ್ ಮೈರ, ರತ್ನಕುಮಾರ ಚೌಟ, ಹರೀಶ್ ಆಚಾರ್ಯ, ಮಂದಾರತಿ ಶೆಟ್ಟಿ, ಸಂದೇಶ್ ಶೆಟ್ಟಿ, ದೇವರಾಜ್ ಸಾಲಿಯಾನ್, ರಾಜೇಶ್ ಶೆಟ್ಟಿ, ಸುನೀಲ್ ಶೆಟ್ಟಿಗಾರ್, ಸುರೇಶ್ ಕುಲಾಲ್, ವಿಶ್ವನಾಥ ಶೆಟ್ಟಿಗಾರ್, ದೇವಪ್ಪ ಗೌಡ, ಅಮ್ಮು ಕೋಟ್ಯಾನ್, ಮದಂಗೋಡಿ, ಲಿಂಗಪ್ಪ ಪೂಜಾರಿ, ಸಂಜೀವ ಶೆಟ್ಟಿ ಮದಂಗೋಡಿ ಮೊದಲಾದವರು ಉಪಸ್ಥಿತರಿದ್ದರು.