ಸುಳ್ಯ : ಹೊಳೆಯಲ್ಲಿ ಮುಳುಗಿ ಸಹೋದರಿಯರು ಸಾವನ್ನಪ್ಪಿದ ಘಟನೆ ಸೋಮವಾರ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಪ ಸಮೀಪದ ಕೇನ್ಯದ ಕನ್ಕಲ್ ಕುಮಾರಧಾರಾ ನದಿಯ ಪೆಲತಗುಂಡಿಯಲ್ಲಿ ಸಂಭವಿಸಿದೆ.
ಸಾವನ್ನಪ್ಪಿದ ಸಹೋದರಿಯರು ಮೂಲತಃ ಬಳ್ಪದ ಕನ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಹಾಗೂ ಆವಂತಿಕಾ (11) ಎಂದು ಗುರುತಿಸಲಾಗಿದೆ.
ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹ ಪತ್ತೆ ಹಚ್ಚಿ ನದಿಯಿಂದ ಹೊರ ತೆಗೆಯಲಾಯಿತು ಎನ್ನಲಾಗಿದೆ.