ಬಂಟ್ವಾಳ, ಜು,01 : ವಸತಿ ಸಮುಚ್ಚಯವೊಂದರ ಮನೆಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಜೂ. 30, ಶುಕ್ರವಾರ ನಡೆದಿದೆ.
ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ.
ಟೆಕ್ನಿಷಿಯನ್ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದು, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಅಂಬ್ಯುಲೆನ್ಸ್ ಮೂಲಕ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯದರೂ ಯಾವುದೇ ಪ್ರಯೋಜನವಾಗಿಲ್ಲ. ತಲೆಗೆ ಗಂಭೀರವಾದ ಏಟು ಬಿದ್ದಿರುವುದರಿಂದ ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
5 Comments
Pingback: smooth jazz
Pingback: ดูแลผู้ป่วยมะเร็ง
Pingback: หวยหุ้นจีน เวลาในการซื้อและปิดรับ
Pingback: aksara 178
Pingback: ปัง ปัง สล็อต