ಬೆಂಗಳೂರು, ಆ. 07 : ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ವಿದೇಶದಲ್ಲಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ತಮ್ಮ ಪತಿ ವಿಜಯ್ ಜತೆಗೆ ಬ್ಯಾಂಕಾಕ್‍ಗೆ ತೆರಳಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿದ್ದು ವಿಜಯರಾಘವೇಂದ್ರ ಅವರನ್ನು 2007, ಆಗಸ್ಟ್ 26 ರಂದು ಮದುವೆಯಾಗಿದ್ದರು. ವಿಜಯರಾಘವೇಂದ್ರ ಹಾಗೂ ಸ್ಪಂದನಾರದ್ದು ಪ್ರೇಮವಿವಾಹವಾಗಿತ್ತು. ನಟಿ ಸ್ಪಂದನಾ 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು.