ಸುಳ್ಯ, ಆ. 08 : ಅರಂತೋಡಿಯಲ್ಲಿ ಪಾದಚಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಉಳುವಾರು ನಿವಾಸಿ ತೀರ್ಥರಾಮ ಎಂದು ಗುರುತಿಸಲಾಗಿದೆ.
ಪಾದಚಾರಿ ತೀರ್ಥರಾಮ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಓಮಿನಿ ಕಾರೊಂದು ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.