ಬಿಹಾರ, ಆ. 18: ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಬಿಮಲ್ ಯಾದವ್ ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ಮುಂಜಾನೆ ಬಿಮಲ್ ಯಾದವ್ ಅವರ ಮನೆಯ ಬಾಗಿಲು ತಟ್ಟಿದ್ದು,ಬಾಗಿಲು ತೆಗೆದಾಕ್ಷಣ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪ್ರದೇಶದ ಸಂಸದರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.