ಕಾರ್ಕಳ, ಆ.24: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಎಂದು ಗುರುತಿಸಲಾಗಿದೆ.
ರಜನೀಶ ಅವರು ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಉಡುಪಿಯ ಆಸ್ವತ್ರೆಯೊಂದಕ್ಕೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿದ್ದರು.
ಆ.. 20 ಭಾನುವರ ಏಕಾಎಕಿ ವಾಂತಿ ಜ್ವರ ಉಲ್ಬಣಗೊಂಡಿದ್ದು ಉಡುಪಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.