ಕುಂದಾಪುರ, ಸೆ. 01 : ಹತ್ತನೇ ತರಗತಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ.
ಮೃತರನ್ನು ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು(16) ಎಂದು ಗುರುತಿಸಲಾಗಿದೆ.
ಸಿಂಧು ಕುಂದಾಪುರದ ವಡೇರಹೋಬಳಿ ಎಂಬಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದಳು. ಈಕೆ ಗುರುವಾರ ಅನಾರೋಗ್ಯದ ಕಾರಣ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.