ಬಂಟ್ವಾಳ, ಸೆ. 10 : ಕರ್ನಾಟಕ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ಸೆ. 09, ಶನಿವಾರ ಕೇಂದ್ರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದರು ಹಾಗೂ ಆಶೀರ್ವಾದ ಪಡೆದರು. ಮತ್ತು ಅವರ ಆರೋಗ್ಯವನ್ನು ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎನ್.ಎಸ್.ಭೋಸರಾಜು ಅವರು, ಜನಾರ್ದನ ಪೂಜಾರಿ ಅವರು ನಮಗೆಲ್ಲರಿಗೂ ಮಾರ್ಗದರ್ಶಿ. ಪ್ರಾಮಾಣಿಕವಾಗಿ ಹಾಗೂ ಕಠಿಣ ಪರಿಶ್ರಮದಿಂದ ಪಕ್ಷವನ್ನು ಒಗ್ಗೂಡಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು.