ಕಾಸರಗೋಡು, ಸೆ.29 : ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದು ಪಿಕಪ್ ಚಾಲಕ ಸಾವನ್ನಪ್ಪಿದ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ.
ಮೃತರನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ ( 43) ಎಂದು ಗುರುತಿಸಲಾಗಿದೆ.
ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಮುಸ್ತಫಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.