ಸುಳ್ಯ, ಸೆ. 30 : ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕಲ್ಲಪಳ್ಳಿ ಸಮೀಪ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಗುರುವಾರ ನಡೆದಿದೆ.
ಮರ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಲ್ಲಪಳ್ಳಿ ಸಮೀಪ ಗಡಿಗುಡ್ಡೆ ಎಂಬಲ್ಲಿ ಮಗುಚಿ ಬಿದ್ದಿದೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು, ಬಳಿಕ ಲಾರಿಯನ್ನು ತೆರವುಗೊಳಿಸಲಾಯಿತು ಎಂದು ವರದಿಯಾಗಿದೆ.