ಪುತ್ತೂರು,ಅ.02: ಪ್ರವಾಸಕ್ಕೆ ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಯನಾಡ್ ನಲ್ಲಿ ಶನಿವಾರ ನಡೆದಿದೆ.
ಮೃತರನ್ನು ಪುತ್ತೂರು ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ ಮಹಮ್ಮದ್ ಅಝೀಂ (21) ಎಂದು ಗುರುತಿಸಲಾಗಿದೆ.
ಪುತ್ತೂರಿನಿಂದ ಸ್ನೇಹಿತರೆಲ್ಲಾ ಸೇರಿಕೊಂಡು ಕೇರಳ ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು. ಪಯ್ಯನೂರು ಸಮೀಪ ಕೆರೆಯಲ್ಲಿ ಸ್ನಾನ ಮಾಡಲು ಇಳಿದಿದ್ದು, ಈ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.