ಉಳ್ಳಾಲ, ಅ. 11 : ಸಂಚರಿಸುತ್ತಿದ್ದ ಮೀನು ಸಾಗಾಟದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಮೃತ ಸವಾರನನ್ನು ಕೋಟೆಕಾರ್ನ ನಿವಾಸಿ ಹನೀಫ್ ಎಂಬವರ ಮಗ ಅಝ್ವೀನ್ (21)ಎಂದು ಗುರುತಿಸಲಾಗಿದೆ.
ಅಝ್ವೀನ್ ಮೀನುಗಾರಿಕೆಯ ಕೆಲಸಕ್ಕೆಂದು ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಮೀನು ಸಾಗಾಟ ವಾಹನದ ಚಾಲಕ ಬ್ರೇಕ್ ಹಾಕಿದ ಪರಿಣಾಮ ಬೈಕ್ ನಿಯಂತ್ರಣ ಕಳಕೊಂಡು ಢಿಕ್ಕಿ ಹೊಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಅಝ್ವೀನ್ ಅವರನ್ನು ತಕ್ಷಣ ಆಸ್ಲತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಸವಾರ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.