ಬಂಟ್ವಾಳ, ಅ.13 : ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಗುರುವಾರ ನಡೆದಿದೆ.
ಮೃತರನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಎಂದು ಗುರುತಿಸಲಾಗಿದೆ.
ಪಾವನ ಅವರು ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.
ಮೆಲ್ಕಾರ್ ಟ್ರಾಫಿಕ್ ಪೋಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.