ಕಾರ್ಕಳ, ಅ. 17 : ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಲೊಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.