ಉಡುಪಿ,ನ. 3 : ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಸಂತೆಕಟ್ಟೆ ಕ್ಲಾಸಿಕ್ ಸರ್ವಿಸ್ ಸೆಂಟರ್ ಬಳಿ ನ.1ರಂದು ನಡೆದಿದೆ.
ಮೃತರನ್ನು ಸಂಜೀವ (61) ಎಂದು ಗುರುತಿಸಲಾಗಿದೆ. ಹೆದ್ದಾರಿ ಸಮೀಪದ ರಸ್ತೆಯ ಬದಿಯಲ್ಲಿರುವ ಮಣ್ಣು ರಸ್ತೆಯಲ್ಲಿ ಸಂಜೀವ ಅವರು ನಡೆದುಕೊಂಡು ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಸಂಜೀವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ