ಗುರುಗ್ರಾಮ ನ. 09 : ಸ್ಲೀಪರ್ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾದ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ನ ಮೇಲ್ಸೇತುವೆ ಬಳಿ ಬುಧವಾರ ನಡೆದಿದೆ.
ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಬಸ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ನಿದ್ರಾವಸ್ಥೆಯಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.