ಬೀಜಿಂಗ್, ನ 17 : ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಕಲ್ಲಿದ್ದಲು ಗಣಿ ಕಂಪನಿಯ ಕಟ್ಟಡದಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು, ಈ ಅಗ್ನಿ ಅವಘಡದಲ್ಲಿ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಳಗ್ಗೆ ಸುಮಾರು 6. 50 ಕ್ಕೆ (ಸ್ಥಳೀಯ ಕಾಲಮಾನ) ಲುಲಿಯಾಂಗ್ ನಗರದ ಲಿಶಿ ಜಿಲ್ಲೆಯಲ್ಲಿರುವ ಯೋಂಗ್ಜು ಕಲ್ಲಿದ್ದಲು ಕಂಪನಿಗೆ ಸೇರಿದ ಐದು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿಕಾಣಿಸಿಕೊಂಡಿದೆ. ದುರಂತದಲ್ಲಿ 26 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಲುಲಿಯಾಂಗ್ ಫಸ್ಟ್ ಪೀಪಲ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಚೀನಾದ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
3 Comments
Pingback: relaxing
Pingback: relaxing jazz
Pingback: relax music