ಉಡುಪಿ, ನ. 24 : ಹೆಬ್ರಿಯಲ್ಲಿರುವ ಪೆಟ್ರೋಲ್ ಬಂಕ್ ವೊಂದರಲ್ಲಿ ಮಲಗಿದ್ದ ಕಾರ್ಮಿಕರೊಬ್ಬರ ಮೇಲೆ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪೆಟ್ರೋಲ್ ಬಂಕ್ನಲ್ಲಿ ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ ಕಾರ್ಮಿಕ ಶಿವರಾಜ್ (38). ಇವರು ಶಿವಮೊಗ್ಗ ಮೂಲದವರಾಗಿರುತ್ತಾರೆ.
ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮದ ಸೊಮೇಶ್ವರ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ರಾತ್ರಿ ಗೂಡ್ಸ್ ವಾಹನವನ್ನು ನಿಲ್ಲಿಸಿ ವಾಹನದ ಎದುರು ಮಲಗಿದ್ದ ಇಬ್ಬರ ಮೇಲೆ ಶುಕ್ರವಾರ ಬೆಳಗಿನ ಜಾವ ಡೀಸೆಲ್ ಹಾಕಿಸಲು ಬಂದಿದ್ದ ಟಿಪ್ಪರ್ ಚಾಲಕ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟು ಇನ್ನೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.
ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.