ಹೊಸದಿಲ್ಲಿ, ಡಿ .17 : ಕೊರೊನಾ ಸೋಂಕು ಮತ್ತೆ ದೇಶದಲ್ಲಿ ಹೆಚ್ಚುತ್ತಿದ್ದು,ವಿಶ್ವದ ಹಲವೆಡೆ ವ್ಯಾಪಿಸಿರುವ ಕೋವಿಡನ ಹೊಸ ಮಾದರಿಯ ತಳಿ ಜೆಎನ್.1 ಇದೀಗ ಭಾರತಕ್ಕೂ ಕಾಲಿಟ್ಟಿದೆ. ಅತ್ಯಂತ ವೇಗವಾಗಿ ಹರಡಬಲ್ಲ ಕೊರೊನಾ ಸೋಂಕಿನ ಉಪತಳಿ ಜೆಎನ್.1 ದೇಶದಲ್ಲಿ ಮೊದಲ ಬಾರಿಗೆ ಕೇರಳದಲ್ಲಿ ಪತ್ತೆಯಾಗಿದೆ. ಇದು ದೇಶದಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ.
ಭಾರತ ಸೇರಿ ಜಗತ್ತಿನೆಲ್ಲೆಡೆ ಮತ್ತೊಮ್ಮೆ ಕೊರೊನಾ ವಕ್ಕರಿಸುವಂತಿದೆ. ಮತ್ತೆ ಕೊರೊನಾ ಕೇಸ್ಗಳ ಸಂಖ್ಯೆ ಹೆಚ್ಚುತ್ತಿದೆ. ಅಮೆರಿಕಾ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಉಪತಳಿ ಜೆಎನ್.1 ಭಾರತದಲ್ಲೂ ಇದೀಗ ಕಂಡುಬಂದಿದೆ.
ಕೇರಳದಲ್ಲಿ ಸೋಂಕು ಪತ್ತೆಯಾಗುತ್ತಿದ್ದಂತೆ ಕರ್ನಾಟಕ ರಾಜ್ಯ ದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜೆಎನ್.1 ತಳಿ ವೇಗವಾಗಿ ವ್ಯಾಪಿಸುತ್ತದೆ. ಆದರೂ ಸೋಂಕಿನ ತೀವ್ರತೆಯ ಬಗ್ಗೆ ಇನ್ನೂ ಮಾಹಿತಿ ಲಭ್ಯಿಸಿಲ್ಲ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ(ಸಿಡಿಸಿ) ಮಾಹಿತಿ ನೀಡಿದೆ.