ಬೀಜಿಂಗ್ , ಡಿ. 20 : ಚೀನಾದ ಗನ್ಸು- ಕಿಂಗ್ಹೈ ಗಡಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 111 ಮಂದಿ ಮೃತಪಟ್ಟಿದ್ದು, 400ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದರಿಂದ ಕಟ್ಟಡಗಳು ನೆಲಸಮಗೊಂಡಿದ್ದು ಅವಶೇಷಗಳಡಿ ಹಲವು ಜನರು ಸಿಲುಕಿದ್ದು ಅವರನ್ನು ರಕ್ಷಣಾ ತಂಡದಿಂದ ಭರದ ಕಾರ್ಯಾ ಚರಣೆ ನಡೆಸುತ್ತಿದ್ದು, ಇದುವರೆಗೂ ಸುಮಾರು ನೂರಕ್ಕೂ ಅಧಿಕ ಜನರು ಸಾವನ್ನಪಿರುವ ಕುರಿತು ವರದಿಯಾಗಿದೆ.ಅಲ್ಲದೆ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.