ಮಣಿಪಾಲ, ಡಿ. 20 : ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜಿನ ಪ್ರೊಫೆಸರ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಮಣಿಪಾಲ ಕಾಲೇಜಿನ ಪ್ರೊ. ಡಾ.ಅಲೆಕ್ಸ್ ಜೋಸೆಫ್(47) ಎಂದು ಗುರುತಿಸಲಾಗಿದೆ.
ಕಾಲೇಜಿನಲ್ಲಿರುವ ವೇಳೆ ಡಾ.ಅಲೆಕ್ಸ್ ಜೋಸೆಫ್ ಅವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರನ್ನು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.