ಪಡುಬಿದ್ರಿ, ಜ. 08 : ಸ್ಕೂಟಿಗೆ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಲಿಮಾರು ಬಳಿ ರವಿವಾರ ರಾತ್ರಿ ನಡೆದಿದೆ.
ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ಭಾನುವಾರ ರಾತ್ರಿ ತೆರಳುತ್ತಿದ್ದಾಗ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು (17) ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.