ಬಂಟ್ವಾಳ, ಜ. 20: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಜೆ ವೇಳೆ ನಾವೂರ ಎಂಬಲ್ಲಿ ಗುರುವಾರ ನಡೆದಿದೆ.
ಮೃತರನ್ನು ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಎಂದು ಗುರುತಿಸಲಾಗಿದೆ.
ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ಸಂದರ್ಭ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.