ಬೋಳೂರು, ಫೆ. 14: ಉರ್ವ ಬೋಳೂರು ಶ್ರೀ ಮಾರಿಯಮ್ಮದೇವಸ್ಥಾನ ದಲ್ಲಿ ಫೆ. 11ರಿಂದ ಆರಂಭಗೊಂಡ ಬ್ರಹ್ಮಕಲಶೋತ್ಸವವು ಫೆ. 15ರ ವರೆಗೆ ಜರಗಲಿದೆ.
ಫೆ. 11ರಂದು ಬ್ರಹ್ಮಕಲಶೋತ್ಸವ ವಿಧಿ ಪ್ರಾರಂಭಗೊಂಡಿದ್ದು,13ರಂದು ಪುನಃ ಪ್ರತಿಷ್ಠೆ, 15ರಂದು ಬ್ರಹ್ಮಕಲಶೋತ್ಸವ, 16ರಂದು ವರ್ಷಾವಧಿ ಮಹಾಪೂಜೆ ಪ್ರಸಾದ ಹಾರಿಸುವಿಕೆ, 23ರಂದು ಚಂಡಿಕಾಯಾಗ, 26, 27ರಂದು ವರ್ಷಾವಧಿ ಪೂಜೆ ಮತ್ತು ಮಾ. 2ರಂದು ಮಲರಾಯ ನೇಮ ಜರಗಲಿದೆ.