ಮಂಗಳೂರು, ಏ 04 : ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಅವರು ಬುಧವಾರ
ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಿತು ನಂತರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಎಂಎಲ್ ಸಿ ಐವನ್ ಡಿಸೋಜ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿ, ಕಾರ್ಪೊರೇಟರ್ ಗಳು ಉಪಸ್ಥಿತರಿದ್ದರು.