ಚಿಕ್ಕಬಳ್ಳಾಪುರ, ಏ. 08 : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಹೈಕಮಾಂಡ್ ಕೊನೆ ಕ್ಷಣದಲ್ಲಿ ರಕ್ಷಾ ರಾಮಯ್ಯ ಅವರಿಗೆ ನೀಡಿದೆ.
ಇದರಿಂದ ನೀರಸೆಗೊಂಡ ವೀರಪ್ಪ ಮೊಯ್ಲಿ ಇದೀಗ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅಲ್ಲದೇ ವೀರಪ್ಪ ಮೊಯ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಘೋಷಣೆ ಸೂಚಿಸಿದ್ದಾರೆ.