ಬೆಂಗಳೂರು, ಏ.16 :ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಟ ದ್ವಾರಕೀಶ್ ಅವರು ಕಳ್ಳ ಕುಳ್ಳ, ಗುರು ಶಿಷ್ಯರು, ಪಚಂಡ ಕುಳ್ಳ, ಕಿಟ್ಟುಪುಟ್ಟು, ಸಿಂಗಾಪೂರಿನಲ್ಲಿ ರಾಜಕುಳ್ಳ, ಅದೃಷ್ಟವಂತ, ನ್ಯಾಯ ಎಲ್ಲಿದೆ, ಪೆದ್ದ ಗೆದ್ದ, ಮಂಕುತಿಮ್ಮ ಪೊಲೀಸ್ ಪಾಪಣ್ಣ, ಆಪ್ತಮಿತ್ರ ಮುದ್ದಿನ ಮಾವ, ವಿಷ್ಣುವರ್ಧನ, ರಾಯರು ಬಂದರು ಮಾವನ ಮನೆಗೆ, ಆಟಗಾರ, ಬಂಗಾರದ ಮನುಷ್ಯ, ಗಲಾಟೆ ಸಂಸಾರ, ಮನೆ ಮನೆ ಕಥೆ, ಆಫ್ರಿಕಾದಲ್ಲಿ ಶೀಲಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.