ಮಂಗಳೂರು, ಏ.26: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದಲ್ಲಿ ಇದು ಮೊದಲ ಹಂತದ ಮತದಾನವಾಗಿದೆ. ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ, ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇಂದು ಬೆಳಿಗ್ಗೆ ಮತದಾನ ಮಾಡಿದರು.
ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ತಮ್ಮ ಹಕ್ಕು ಚಲಾಯಿಸಿದರು.
ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ತಮ್ಮ ಸ್ವಗೃಹದ ಸಮೀಪದ ಕೊರ್ಗಿ ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಇಂದು ಬೆಳಿಗ್ಗೆ ಮತಗಟ್ಟೆ ಸಂಖ್ಯೆ 97ರಲ್ಲಿ ಮತದಾನ ಮಾಡಿದರು.