ಮಂಗಳೂರು,ಏ.30. ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ ಗಬ್ಬರ್ ಸಿಂಗ್’ ಸಿನಿಮಾ ತೆರೆ ಕಾಣಲಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ..
ಸಿನಿಮಾದಲ್ಲಿ ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ ಅಭಿನಯಿಸಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್,ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಉಪಸ್ಥಿತರಿದ್ದರು.