ಕಾಸರಗೋಡು, ಮೇ. 23 : ಚಲಿಸುತ್ತಿದ್ದ ಟ್ಯಾಂಕರ್ ನಿಂದ ಅನಿಲ ಸೋರಿಕೆ ಉಂಟಾದ ಘಟನೆ ಕಾಞ೦ಗಾಡ್ ಸಮೀಪದ ಚಿತ್ತಾರಿಯಲ್ಲಿ ಗುರುವಾರ ನಡೆದಿದೆ.
ಟ್ಯಾಂಕರ್ ಮಂಗಳೂರಿನಿಂದ ಕೋಜಿಕ್ಕೋಡ್ಗೆ ತೆರಳುತ್ತಿತ್ತು. ಈ ವೇಳೆ ಟ್ಯಾಂಕರ್ ನಿಂದ ಅನಿಲ ಸೋರಿಕೆ ಉಂಟಾಗಿದೆ. ಕೂಡಲೇ ಚಾಲಕ ಟ್ಯಾಂಕರ್ ನಿಲುಗಡೆ ಗೊಳಿಸಿ ಕಂಪೆನಿ ಅಧಿಕಾರಿಗಳಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಗಂಟೆಗಳ ಬಳಿಕ ಸೋರಿಕೆ ತಡೆಗಟ್ಟಲಾಗಿದೆ.. ಕಾಞ೦ಗಾಡ್ , ಕಾಸರಗೋಡು ಮೊದಲಾದೆಗಳಿಂದ ಮೂರು ಘಟಕ ಅಗ್ನಿಶಾಮಕ ದಳದ ಸಿಬಂದಿಗಳು ಸೋರಿಕೆ ತಡೆಗಟ್ಟಲು ಹಸರಸಾಹಸಪಟ್ಟಿದ್ದು. ಮಂಗಳೂರಿನಿಂದ ಅಧಿಕಾರಿಗಳ ತಂಡವು ಸ್ಥಳಕ್ಕೆ ಆಗಮಿಸಿದ್ದು , ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ .