ನವದೆಹಲಿ ಜೂ. 05: ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ದೆಹಲಿಯಲ್ಲಿ ಇಂದು ಎನ್‌ಡಿಎ ನಾಯಕರುಗಳು ಸಭೆ ಸೇರಿದ್ದು, ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್‌ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಗೆ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್‌ಡಿಎ ನಾಯಕರು ಸಭೆಯಲ್ಲಿ ಹಾಜರಿದ್ದರು.
ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಎನ್‌ಡಿಎ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ ಎಂದು ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ.
ಎನ್‌ಡಿಎ ಸರ್ಕಾರ ರಚನೆಗೆ ಚಂದ್ರಬಾಬು ನಾಯ್ಡು ,ಎನ್‌ಡಿಎ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ.