ನವದೆಹಲಿ, ಜೂ. 09 : ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಇದೇ ವೇಳೆ ಮೋದಿಯವರ ಕ್ಯಾಬಿನೆಟ್ ಸಚಿವರಾಗಿ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ ಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಜೈಶಂಕರ್ ಪ್ರಸಾದ್, ಇಂಗ್ಲೀಷ್ ನಲ್ಲಿ ಸುಬ್ರಮಣ್ಯಂ ಜೈಶಂಕರ್, ಮನೋಹರ್ ಲಾಲ್ ಕಟ್ಟರ್, ಜೆ ಡಿ ಎಸ್ ನಾಯಕ ಎಚ್ ಡಿ ಕುಮಾರ ಸ್ವಾಮಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ ಎಸ್ ಯಡಿಯೂರಪ್ಪ, ಮುರುಳಿ ಮನೋಹರ್ ಜೋಷಿ, ಚಿತ್ರ ನಟರಾದ ರಜಿನಿಕಾಂತ್, ಉದ್ಯಮಿಗಳಾದ ಮುಖೇಶ್ ಅಂಬಾನಿ ಮೊದಲಾದವರು ಉಪಸ್ಥಿತರಿದ್ದರು.