ನವದೆಹಲಿ, ಜೂ.30: ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂ ಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಇಂದು ಅಧಿಕಾರ ವಹಿಸಿಕೊಂಡರು.
ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋ ಜ್ ಪಾಂಡೆ ಅವರು ನಿವೃತ್ತರಾದ ಹಿನ್ನಲೆ ಇದೀಗ ಸೇನೆಯ ಜನರಲ್ ದ್ವಿವೇ ದಿಯವರು ಅಧಿಕಾರ ವಹಿಸಿಕೊಂಡಿದ್ದಾರೆ
ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ಜನರಲ್ ದ್ವಿವೇದಿ ಅವರು ಸೇನೆಯ ಉಪಮುಖ್ಯಸ್ಥರಾಗಿ ಸೇ ವೆ ಸಲ್ಲಿಸುತ್ತಿದ್ದರು.
ಫೆಬ್ರವರಿ 19ರಂದು ಸೇನಾ ಸಿಬ್ಬಂದಿಯ ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು 2022-2024ರವರೆಗೆ ಉತ್ತರ ಕಮಾಂಡ್ ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದರು.