ಕಡಬ, ಸೆ.6: ಕಾಲು ಜಾರಿ ತೋಡಿಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ನಡೆದಿದೆ.ಮೃತರನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ.
ಉಮೇಶ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು 1ಕಿಮೀ ಮುಂದೆ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.