ಉಳ್ಳಾಲ,ಅ.24 :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ (11) ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗದಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.