ಮಂಗಳೂರು,ಅ.27 : ಮಿನಿ ಬಸ್ ಮಗುಚಿ ಬಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಂತೂರಿನಲ್ಲಿ ಶನಿವಾರ ಸಂಜೆ ನಡೆದಿದೆ.
ಮಿನಿ ಬಸ್ ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಮಂಗಳೂರು ಕಡೆಗೆ ಬರುತ್ತಿದ್ದ ಸಂದರ್ಭ ಬಸ್ನ ಎದುರಿನಲ್ಲಿದ್ದ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ದಿಬ್ಬವೊಂದರ ಮೇಲೆ ಚಲಿಸಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಮತ್ತು 10ಮಂದಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಎಲ್ಲರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.